Breaking News

ಬಿಜೆಪಿಯವರು ರಾಜಕೀಯ ದುರುದ್ದೇಶಕ್ಕಾಗಿ ಉಲ್ಟಾ ಹೊಡೆದಿದ್ದಾರೆ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ವಕ್ಸ್‌ ಆಸ್ತಿಯನ್ನು ಇಂಚಿಂಚು ಜಾಗವನ್ನು ಪರಭಾವೆಯಾಗಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಯಾಕೆ ಯೂಟರ್ನ್ ಹೊಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟ‌ರ್, ಬಸವರಾಜ ಬೊಮ್ಮಾಯಿ, ಸದಾನಂದಗೌಡ ಅವರ ಅವಧಿಯಲ್ಲಿ ರೈತರಿಗೆ 216 ನೋಟಿಸ್‌ಗಳನ್ನು ಜಾರಿ ಮಾಡಿದ್ದರು. ಈ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಇದೀಗ ಬಿಜೆಪಿಯವರು ರಾಜಕೀಯ ದುರುದ್ದೇಶಕ್ಕಾಗಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿಯವರು ರಾಜಕಾರಣಕ್ಕಾಗಿಯೇ ಹೇಳಿಕೆ ಕೊಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *