ಹುಬ್ಬಳ್ಳಿ: ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಈವರೆಗೆ ಧ್ವನಿ ಎತ್ತಿಲ್ಲ. ಕೇಂದ್ರದ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 15 ನೇ ಹಣಕಾಸು ಆಯೋಗದಿಂದ 11490 ಕೋಟಿ ರೂಪಾಯಿ ವಿಶೇಷ ಅನುದಾನ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿತ್ತು. ಈವರೆಗೂ ಒಂದು ಪೈಸೆ ಕೂಡ ರಾಜ್ಯಕ್ಕೆ ಬಂದಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ಸಂಸದರು ಮುಖಂಡರು ಒಂದು ದಿನವಾದರೂ ಧ್ವನಿ ಎತ್ತಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
ಅವರು ಕೊಟ್ಟಿಲ್ಲ ಎಂದು ನಾನು ಹೇಳುತ್ತೇನೆ. ಅವರು ಕೊಟ್ಟಿರುವುದಾಗಿ ಹೇಳಿದ್ರೆ ರಾಜಕೀಯ ಬಿಟ್ಟು ಬಿಡುತ್ತೇನೆ. ಹಾಗೆಯೇ ವಿಶೇಷ ಅನುದಾನ ಕೊಟ್ಟಿದ್ದರೇ ಜೋಶಿ ರಾಜಕೀಯ ಬಿಡುತ್ತಾರೆಯೇ ಎಂದು ಸವಾಲ್ ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

