ಧಾರವಾಡ: ರೈತರ ಪಹಣಿ ಪತ್ರಿಕೆಗಳಲ್ಲಿ ವಕ್ಷ ಆಸ್ತಿ ಎಂಬ ಹೆಸರು ನಮೂದಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಿಂದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕರಾದ ಅಮೃತ ದೇಸಾಯಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯದ ರೈತರ ಪಹಣಿ ಪತ್ರಿಕೆಯಲ್ಲಿ ವಕ್ಷ ಆಸ್ತಿ ಎಂದು ನಮೂದಾಗುತ್ತಿದೆ. ಈ ವಕ್ಷ ಬೋರ್ಡ್‌ನ್ನೇ ಸರ್ಕಾರ ರದ್ದುಗೊಳಿಸಬೇಕು ಎಂದು ಧಿಕ್ಕಾರ ಕೂಗಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

