ರಾಯಚೂರು: ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಬೆಳೆ ಕಟಾವು ಹಂತದಲ್ಲೇ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಅಕ್ರಮ ಕುರಿತು ಯಾವುದಾದರೂ ಅರ್ಜಿಗಳು ಬಂದಲ್ಲಿ ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಸತ್ಯವಿದ್ದರೆ ಕ್ರಮಕ್ಕೆ ಮುಂದಾಗಬೇಕು. ಅಧಿಕಾರಿಗಳು ರೈತರ ಸ್ಥಳಗಳಿಗೆ ಹೋಗಿ ವೀಕ್ಷಣೆ ಮಾಡಬೇಕು. ಅಲ್ಲದೆ ಜಿಲ್ಲೆಯ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಲ್ಲಿ ಜಾಗೃತಿ ಮೂಡಿಸಬೇಕು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆ ಪಡೆದ ರೈತರು ಜೀವನ ಪರಿ ಸೌಲಭ್ಯ ಪಡೆಯುವಂತಿಲ್ಲ. ವ್ಯವಸ್ಥೆಯನ್ನು ಬದಲಾವಣೆ ಮಾಡುವ ಸಲುವಾಗಿ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ಜಿಲ್ಲೆಯಲ್ಲಿ , ರೇಷ್ಮೆ ಬೆಳೆಯನ್ನು ವಿಸ್ತರಣೆ ಮಾಡಬೇಕು. ಅಲ್ಲದೆ ಅರಣ್ಯ ಇಲಾಖೆಯ ವತಿಯಿಂದ ನೂತನ ಜಿಲ್ಲಾಡಳಿತದ ಆವರಣದಲ್ಲಿ ಉತ್ತಮ ರೀತಿಯ ಗಿಡಗಳನ್ನು ನೆಡಬೇಕು. ಅದನ್ನು ಸರಿಯಾಗಿ ಪಾಲನೆ ಮಾಡಬೇಕು. ಜಿಲ್ಲೆಯ ಅಭಿವೃದ್ಧಿ ಕೆಲಸ ಕಾರ್ಯಗಳ ಸಲುವಾಗಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ವಾಸವಾಗಬೇಕು.
ಸರ್ಕಾರಕ್ಕೆ ಕೆಟ್ಟ ಹೆಸರು ಬಾರದ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

