Breaking News

ಬೆಳಗಾವಿ ಜಂಟಿ ಅಧಿವೇಶನಕ್ಕೆ ಬರುವಂತೆ ಬರಾಕ್ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಗದಗ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮ. ಆ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.
ಈ ಅವಧಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಅವರಿಗೆ ಮಹತ್ವದ ಸಂದರ್ಭ. ಆದಕಾರಣ, 2024ರ ಡಿಸೆಂಬರ್‌ ಅಥವಾ 2025ರ ಜ.1ರ ನಂತರ ಹಾಗೂ ಅ.2ರ ನಡುವಿನ ಅವಧಿಯಲ್ಲಿ ಅನುಕೂಲ ನೋಡಿಕೊಂಡು ಬರುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *