Breaking News

ಜೂಜಾಟವಾಡುತ್ತಿದ್ದ 33 ಜನರನ್ನು ಬಂಧಿಸಿದ ಪೊಲೀಸರು

ನವಲಗುಂದ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ 33 ಜನರನ್ನು ಬಂಧಿಸಿದ ಪೊಲೀಸರು ಬಂಧಿತರಿಂದ 29,215 ರೂಪಾಯಿ ವಶ ಪಡಿಸಿಕೊಂಡ ಘಟನೆ ನಡೆದಿದೆ.

ತಾಲೂಕಿನ ಯಮನೂರು, ಆರೇಕುರಹಟ್ಟಿ ಮತ್ತು ಹಾಲಕುಸುಗಲ್ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ಮತ್ತು ಭಾನುವಾರದಂದು ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟ ಆಡುತ್ತಿದ್ದವರನ್ನು ಹೆಡೆಮುರಿ ಕಟ್ಟಿದ ಖಾಕಿ ಪಡೆ ಕೂಡಲೇ ಅವರನ್ನೆಲ್ಲ ಬಂಧಿಸಿ ನಗದು ವಶ ಪಡಿಸಿಕೊಂಡಿದ್ದಾರೆ.

ಇನ್ನೂ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಜನಾರ್ಧನ ಭಟ್ರಳ್ಳಿ ತಂಡದೊಂದಿಗೆ ದಾಳಿ ನಡೆಸಿ ಜೂಜುಕೋರರನ್ನು ಬಂಧಿಸಿದ್ದಾರೆ.

Share News

About Shaikh BigTv

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *