Breaking News

ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲು ಮುಡಾ ಹಗರಣವನ್ನು ಬಿಜೆಪಿಯವರು ತಂದಿದ್ದಾರೆ: ಕೆ.ಎಂ.ರಾಮಚಂದ್ರಪ್ಪ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದಲೇ ಮುಡಾ ಹಗರಣದ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಅಹಿಂದ್ ಶೋಷಿತ ಸಮುದಾಯ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿದ ನೋಟಿಸ್‌ ಹಿನ್ನೆಲೆಯಲ್ಲಿ ಶೋಷಿತ ಸಮೂದಾಯದ ಮುಖಂಡರೊಂದಿಗೆ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲು ಮುಡಾ ಹಗರಣವನ್ನು ಬಿಜೆಪಿಯವರು ತಂದಿದ್ದಾರೆ. ಈ ಹಿಂದೆಯೇ ಬಿಜೆಪಿ ಅಧಿಕಾರಾವಧಿಯಲ್ಲಿ ಭೂಮಿ ಹಂಚಿಕೆ ಮಾಡಲಾಗಿದೆ. ಆದರೆ ಸುಖಾಸುಮ್ಮನೆ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಇನ್ನು ಮುಡಾ ಹಗರಣದಂತೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧವೂ ಸಹ ಆರೋಪವಿದೆ. ಅದರ ಬಗ್ಗೆ ಕೂಡಾ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮೂದಾಯ ಅಷ್ಟೇ ಅಲ್ಲ ಶೋಷಿತರ ಸಮೂದಯವಿದೆ. ಅವರ ಹೆಸರಿಗೆ ಹಾನಿಯಾಗಲು ನಾವು ಬಿಡುವುದಿಲ್ಲ ಎಂದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *