Breaking News

ಬೀದರ್ ನಲ್ಲಿ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ: 73 ಜನರ ವಿರುದ್ದ ಎಫ್ಐಆರ್‌ ದಾಖಲು

ಬೀದರ್ : ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಸ್/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹೌದು ಕಟಕ ಚಿಂಚೋಳಿ ಠಾಣೆಯಲ್ಲಿ 73 ಜನರ ವಿರುದ್ಧ ದಾಖಲಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಇದೀಗ 73 ಜನರ ವಿರುದ್ಧ ದಾಖಲಾಗಿದೆ. ನವೆಂಬರ್ 2 ರಂದು ಚಳಕಾಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿತ್ತು. ಜಾತ್ರೆಯಲ್ಲಿ ದಲಿತರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರು ಅವರ ಮೇಲೆ ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಗ್ರಾಮದ ಹನುಮಾನ್ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ದಲಿತರ ಮನೆಗೆ ನುಗ್ಗಿ ಸವರ್ಣೀಯರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಪ್ರಕರಣ ದಾಖಲಿಸಿ ಕಟಕಚಿಂಚೋಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *