ರಾಯಚೂರು: ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಮಾರಾಟ ಮಾಡಲು ತಾಲೂಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ಮಾನ್ವಿ ಪಟ್ಟಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ ವತಿಯಿಂದ ನೂತನ ಹತ್ತಿ ಖರೀದಿ ಕೇಂದ್ರವನ್ನು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಅಧಿಕೃತವಾಗಿ ಉದ್ಘಾಟಿಸಿ ಹತ್ತಿ ಮಾರಾಟಕ್ಕೆ ಚಾಲನೆ ನೀಡಿದರು.
ರೈತರು ಹತ್ತಿ ಬೆಳೆಯನ್ನು ಮಾರಾಟ ಮಾಡಲು ಜಿಲ್ಲಾ ಕೇಂದ್ರಕ್ಕೆ ತೆರಳಬೇಕಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ಮಾರಾಟ ಮಾಡಲು ಮಾಹಿತಿ ತಿಳಿಯದ ರೈತರು ಮಧ್ಯವರ್ತಿಗಳ ಮೂಲಕ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದರು ಇದನ್ನು ತಪ್ಪಿಸಲು ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾನ್ವಿ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗಪೂರ್ ಸಾಬ್, ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿಕೆ ಅಮರೇಶಪ್ಪ, ರೌಡೂರ್ ಮಹಾಂತೇಶ್ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಜಿ ಶಿವಮೂರ್ತಿ, ಅಮರೇಗೌಡ ಹಂಚಿನಾಳ, ವೀರಭದ್ರಪ್ಪ ಆಲ್ದಾಳ ಸೇರಿದಂತೆ ನೂರಾರು ರೈತರು, ಭಾರತೀಯ ಹತ್ತಿ ನಿಗಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

