ಬಳ್ಳಾರಿ: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ವರದಿ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.
ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10 ಗುಂಟೆ ಜಾಗ, ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲ ಸಮುದಾಯಗಳ ರೈತಾಪಿ ಜನರ ಒಟ್ಟು 14,210 ಎಕರೆ ಜಮೀನನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

