ಮುಂಬೈ: 1990 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರು ಮಹಾರಾಷ್ಟ್ರದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಇಂದು ನೇಮಕಗೊಂಡಿದ್ದಾರೆ.
ಈ ಹಿಂದೆ ಇದ್ದ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ ಶುಕ್ಲಾ ಅವರನ್ನು ಚುನಾವಣಾ ಆಯೋಗ ಪದಚ್ಯುತಗೊಳಿಸಿದ ಒಂದು ದಿನದ ಬಳಿಕ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ವಿಪಕ್ಷಗಳ ದೂರವಾಣಿ ಕದ್ದಾಲಿಕೆ ಆರೋಪದ ಮೇಲೆ ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿಯನ್ನು ಸಲ್ಲಿಸಿತ್ತು ಇದರ ಆಧಾರದ ಮೇಲೆ ಚುನಾವಣಾ ಆಯೋಗ ಚುನಾವಣೆಗೂ ಮೊದಲೇ ಶುಕ್ಲಾ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೇ ನವೆಂಬರ್ 5 ರೊಳಗೆ ಮಹಾರಾಷ್ಟ್ರದ ಹೊಸ ಡಿಜಿಪಿ ನೇಮಕಕ್ಕಾಗಿ ಮೂವರು ಐಪಿಎಸ್ ಅಧಿಕಾರಿಗಳ ಸಮಿತಿಯನ್ನು ಕಳುಹಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿತ್ತು ಅದರಂತೆ ಇಂದು ಸಂಜಯ್ ವರ್ಮಾ ಅವರನ್ನು ನೇಮಕ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

