Breaking News

ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ

ಧಾರವಾಡ: ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ ಇಟ್ಟಿರುವ ಘಟನೆ ಧಾರವಾಡ ತಾಲೂಕಿನ ಹೊಸ ತೇಗೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಹೊಸತೇಗೂರು ಗ್ರಾಮದ ರಮೇಶ ಗಳಗಿ ಎಂಬುವವರಿಗೆ ಸೇರಿದ ಒಂದು ಕಾರು ಹಾಗೂ ಎರಡು ಬೈಕ್‌ಗಳಿಗೆ ಕಿಡಿಗೇಡಿಗಳು ರಾತ್ರೋರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಮೂರೂ ವಾಹನಗಳು ಸುಟ್ಟಿವೆ. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ ಎಂದು ವಾಹನಗಳ ಮಾಲೀಕರು ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಬೆಂಕಿ ಇಟ್ಟ ಆರೋಪಿಗಳ ಪತ್ತೆಗೆ ಪೊಲೀಸರು ಇದೀಗ ಜಾಲ ಬೀಸಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *