Breaking News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರುದ್ಧ ಹಲವು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು, ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರು ಲೋಕಾಯಕ್ತ ವಿಚಾರಣೆಗೆ ಹಾಜರಾಗಿದ್ರೆ, ಇನ್ನೊಂದು ಕಡೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ತಳ್ಳಾಟ , ನೂಕಾಟ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನಾಕಾರರ ವಾಹನ ಸೀಜ್ ಮಾಡಿದ ಪೊಲೀಸರು ವಾಹನದ ಸಮೇತ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ . ಈ ವೇಳೆ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.
ಸಿಎಂ ಸಿದ್ದರಾಮಯ್ಯರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು, ಸಿಎಂ ಆಗಿ ತನಿಖೆ ಎದುರಿಸುವುದು ರಾಜ್ಯಕ್ಕೆ ಅವಮಾನ, ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *