Breaking News

ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಪ್ರತಿಕ್ರಿಯೆ

ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ ನಡೆದುಕೊಂಡು ಬಂದಿದ್ದೇನೆ ಎಂದರು.
ಮುಡಾ ಹಗರಣದಲ್ಲೂ ನಾನು ಕಾನೂನು ಪ್ರಕಾರವೇ ನಡೆದುಕೊಳ್ಳುತ್ತೇನೆ. ಮುಡಾ ಹಗರಣದಲ್ಲಿ ನಾನು ಕಾನೂನು ಉಲ್ಲಂಘನೆ ಮಾಡಿಲ್ಲ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ನನಗೂ ಕಾನೂನಿನ ತಿಳುವಳಿಕೆ ಇದೆ ಎಂದು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *