Breaking News

ಮಹಿಳೆಯರ ಮೀಸಲಾತಿ ಪ್ರಮಾಣ 35% ಏರಿಕೆ: ಕೇಂದ್ರ ಸರ್ಕಾರ ಘೋಷಣೆ

ಭೋಪಾಲ್‌: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯಿಂದ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಚುನಾವಣೆಯ ಜೊತೆಗೆ, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಅದರಂತೆ ಮಧ್ಯಪ್ರದೇಶ ಕ್ಯಾಬಿನೆಟ್‌ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.
ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ.
ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಸೇವೆಗಳ ಎಲ್ಲಾ ನೇಮಕಾತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 33% ರಿಂದ 35% ಗೆ ಹೆಚ್ಚಿಸಲಾಗಿದೆ. ಇದು ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಮಧ್ಯಪ್ರದೇಶದ ಡಿಸಿಎಂ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ 254 ಹೊಸ ರಸಗೊಬ್ಬರ ಮಾರಾಟ ಕೇಂದ್ರಗಳನ್ನು ತೆರೆಯಲು ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರ ಜಾರಿಯಿಂದ ರೈತರಿಗೆ ಗೊಬ್ಬರಕ್ಕಾಗಿ ಕಾಯುವುದರಿಂದ ಮುಕ್ತಿ ಸಿಗಲಿದೆ ಎಂದಿದ್ದಾರೆ. ವೈದ್ಯಕೀಯ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ, ಅಭ್ಯರ್ಥಿಗಳ ವಯಸ್ಸನ್ನು 40 ವರ್ಷದಿಂದ 50 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟವು ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *