ಹುಬ್ಬಳ್ಳಿ: ಮನೆಯ ಮೇಲ್ಪಾವಣಿಗೆ ತಗಡು ಹಾಕುವ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಘಟನೆ ಹುಬ್ಬಳ್ಳಿಯ ತಾಜ್‌ನಗರದಲ್ಲಿ ನಡೆದಿದೆ.
ಮನೆಯ ಟೆರೇಸ್‌ಗೆ ತಗಡು ಹಾಕುವ ಸಂದರ್ಭದಲ್ಲಿ ಫೈಬರ್ ವೆಲ್ಡಿಂಗ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಬೆಂಕಿ ನಂದಿಸಲಾಗಿದೆ. ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ. ಈ ಬಗ್ಗೆ ಸಾರ್ವಜನಿಕರೇ ಪಬ್ಲಿಕ್ ನೆಕ್ಸ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

