ಬೀದರ್: ತೋಟಗಾರಿಕೆ ವಿಜ್ಞಾನ ಗಳ ವಿಶ್ವವಿದ್ಯಾಲಯ ವತಿಯಿಂದ ನಗರದಲ್ಲಿ ಆಯೋಜಿಸಿರುವ ಮೂರು ದಿನಗಳ ಕಲಾ ಬಿದರಿ ಸಂಗಮ-2024 (ಯುವ ಜನೋತ್ಸವ) ನಿಮಿತ್ತ ಇಂದು (ನ.07) ನಗರದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಅವರು ಚಾಲನೆ ನೀಡಿದರು.
ಶಿವಾಜಿ ವೃತ್ತ, ಹರಳಯ್ಯ ವೃತ್ತ ಮೂಲಕ ಸಾಗಿ ರಂಗ ಮಂದಿರ ಮೈದಾನದಲ್ಲಿ ಕೊನೆಗೊಂಡಿತು. ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.
ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯ 9 ತೋಟಗಾರಿಕೆ ಮಹಾವಿದ್ಯಾಲಯಗಳಾದ ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು, ಅರಭಾವಿ, ಮುನಿರಾಬಾದ, ಬೆಂಗಳೂರು, ಬಾಗಲಕೋಟ, ಕೋಲಾರ, ಶಿರಸಿ, ದೇವಿಹೋಸೂರನ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೀದರ ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ. ಪಾಟೀಲ ಮತ್ತಿತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

