ಹುಬ್ಬಳ್ಳಿ: ರಾಜ್ಯದಲ್ಲಿ ಅತಿ ದೊಡ್ಡ ಹಾವಳಿ ಎದ್ದ ವಕ್ಸ್ ಬೋರ್ಡ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ, ಇಂದು ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಹುಬ್ಬಳ್ಳಿಗೆ ಆಗಮಿಸಿ, ವಕ್ಷದಲ್ಲಿ ಸಿಲುಕಿದ ರೈತರ ಅಹವಾಲುಗಳನ್ನು ಸ್ವೀಕರಿಸಿದರು.
ರಾಜ್ಯ ಸರ್ಕಾರ ನೀಡಿದ ನೋಟಿಸ್‌ನಿಂದ ಕಂಗಾಲಾದ ರೈತರು, ಮತ್ತು ಹಳ್ಳಿ ಮುಖಂಡರು ಆಕ್ರೋಶಕ್ಕೆ ಒಳಗಾಗಿದ್ದರು. ಇದನ್ನರಿತು ಕೇಂದ್ರದಿಂದ ವಕ್ಸ್ ಬೋರ್ಡ್ ಜಾಯಿಂಟ್ ಪಾರ್ಲಿಮೆಂಟ್ ಕಮಿಟಿ ಚೇರ್ಮನ್ ಜಗದಂಬಿಕಾ ಪಾಲ್ ಅವರು ವಕ್ಷ್ಯಲ್ಲಿ ನೋಂದಣಿಯಾದ ಆಸ್ತಿಯನ್ನು ಕಳೆದುಕೊಂಡ ರೈತರ ಮನವಿಯನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ರೈತರಿಂದ ಅಹವಾಲು ಸ್ವೀಕರಿಸಿದರು.
ಇನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ವಿಪಕ್ಷ ಉಪನಾಯಕ ನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವಾರು ರೈತರು ಅಹವಾಲುಗಳನ್ನು ನೀಡಿದರು. ಪಾಲ್ ಅವರ ಜೊತೆ ಸಂಸದ ತೇಜಸ್ವಿ ಸೂರ್ಯ, ಅರವಿಂದ ಬೆಲ್ಲದ್, ಎಮ್ ಆರ್ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

