ಸಂಡೂರು : ರಾಜ್ಯದಲ್ಲಿ ಐದಕ್ಕೆ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗಲಾಗುತ್ತಿದ್ದು. ಗೃಹ ಲಕ್ಷ್ಮೀ ಯೋಜನೆಯ ಕಂತಿನ ಬಾಕಿ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಂಡೂರಿನಲ್ಲಿ ಇಂದು ತಮ್ಮ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನಗಳು ಸ್ಥಗಿತಗೊಳ್ಳುವುದಿಲ್ಲ, ಕಾಂಗ್ರೆಸ್ ಸರ್ಕಾರ ಇರುವವರಗೆ ಮುಂದುವರೆಸಿಕೊಂಡು ಹೋಗಲಾಗುವುದು ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ, ಆದ್ದರಿಂದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿಯವರು ಸುಳ್ಳುಗಳನ್ನು ಹರಡುತ್ತಿದ್ದಾರೆ. ಕೇವಲ ಸುಳ್ಳುಗಳನ್ನು ಹರಡುವುದಕ್ಕೇ ಕೋಟಿ, ಕೋಟಿ ರೂಪಾಯಿ ಖರ್ಚು ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

