ಧಾರವಾಡ : 2024-25ನೇ ಸಾಲಿನ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ, ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್‍ಎಮ್‍ಇ) ಘಟಕಗಳ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಹ ಆಸಕ್ತಿವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸ್ತಕರು ನವೆಂಬರ 21, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

