Breaking News

ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಪಲ್ಲವಿ ಜಿ.

ರಾಯಚೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಜಾರಿಗೊಳಿಸಿರುವ ವಿವಿಧ ಯೋಜನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲೆಮಾರಿ ಹಾಗೂ ಅರೆ ಅಲೆಮಾರಿಗಳಲ್ಲಿ 46 ಜನಾಂಗದವರಿದ್ದಾರೆ. ಇವರು ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆ ಕೈಗೊಂಡು ಸ್ಥಿರವಾಗಿ ಒಂದು ಕಡೆ ನೆಲೆಸುವಂತೆ ಮಾಡಲು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ನಿಗಮ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳಲ್ಲಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು. ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ 2021-22ನೇ ಸಾಲಿನ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಯ್ಕೆಗೊಂಡ ಫಲಾಪೇಕ್ಷಿಗಳಿಗೆ ಅನುದಾನವನ್ನು ಹೊಂದಿಸಿ, ಬಿಡುಗಡೆ ಮಾಡಬೇಕು. ಅಲ್ಲದೆ 2021-22ನೇ ಸಾಲಿನಲ್ಲಿ ಆಯ್ಕೆಗೊಂಡ ನಿವೇಶನ ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಕರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ ನಿಗದಿಯಾದ ಘಟಕ ವಚ್ಚ ₹ 2ಲಕ್ಷ ಸಾಕಾಗುತ್ತಿಲ್ಲ, ಈ ಯೋಜನೆ ಪೂರ್ವದಲ್ಲಿ ನಿಗದಿಪಡಿಸಿದಂತೆ ವಸತಿಗಾಗಿ 4 ಲಕ್ಷಕ್ಕೆ, ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರಾಯಚೂರು ನಗರಸಭೆಯ ವ್ಯಾಪ್ತಿಯ ವಾರ್ಡ್-02ರ ವ್ಯಾಪ್ತಿಯ ಸುಮಾರು ವರ್ಷಗಳಿಂದ ವಾಸುತ್ತಿದ್ದು, ಕುಟುಂಬಗಳಿಗೆ ಮೂಲಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಸಿಸಿ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಎಸ್ಪಿ, ಟಿಎಸ್ಪಿ ಅನುದಾನದಲ್ಲಿ ಅಥವಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಲೆಮಾರಿ ಖಾತೆಗಳಲ್ಲಿ ಬಳಿಕೆ ಆಗದೆ ಉಳಿದಿರುವ ಅನುದಾನದಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ನಿತೀಶ್ ಕೆ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಆನಂದ, ಜಿಲ್ಲಾ ಅನುಷ್ಠಾನ ಸಮಿತಿಯ ಪರಶುರಾಮ ನಕ್ಕುಂಡಿ, ಅಲೆಮಾರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *