Breaking News

ಲಿಂಗಾಯತರ ಅಸ್ಮಿತೆ ಜೊತೆ ಆಟ ಆಡುವುದು ಬೇಡ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಸಂಘ ಪರಿವಾರದವರು ವಚನ ದರ್ಶನ ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ‌. ವಚನಗಳು ನಮ್ಮ(ಲಿಂಗಾಯತ) ಅಸ್ಮಿತೆ. ನಮ್ಮ ಅಸ್ಮಿತೆ ಜೊತೆ ಆಟ ಆಡುವುದು ಬೇಡ ಎಂದು ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು.
ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ಅವರು ನಮ್ಮ ಅಸ್ಮಿತೆಗಳಾದ ವಚನಗಳ ಬಗ್ಗೆ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು.
ಇಲ್ಲವಾದರೆ ನಾವು ನಿಮ್ಮ ಸುಳ್ಳು ಅಸ್ಮಿತೆ ಬಿಚ್ಚಿಡುತ್ತೇವೆ. ವೇದ, ಉಪನಿಷತ್ತುಗಳ ಸುಳ್ಳಿನ ಬಗ್ಗೆ ನಾವೂ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಆರಂಭದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು, ಬಳಿಕ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದರು, ಇದೀಗ ಹಿಂದುತ್ವದ ಪರವಾಗಿ ಹೋರಾಟಕ್ಕೆ ದುಮುಕಿದ್ದಾರೆ ಎಂದು ಛೇಡಿಸಿದರು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *