Breaking News

15 ರಿಂದ 20 ದಿನಗಳಲ್ಲಿ ಸಿದ್ಧರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ: ಬಿ.ಎಸ್.ಯಡಿಯೂರಪ್ಪ

ಸಂಡೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿದ್ದು, ಅಧಿಕಾರದಲ್ಲಿ ಮುಂದುವರಿಯಲು ಅವರು ಅರ್ಹರಲ್ಲ. 15 ರಿಂದ 20 ದಿನಗಳಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ಹೇಳಿದರು.
ಸಂಡೂರು ಕ್ಷೇತ್ರದ ಬೊಮ್ಮಘಟ್ಟ, ಚೋರನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಡಾ ಹಗರಣ ಆರೋಪ ಸಾಬೀತಾಗುತ್ತದೆ‌. ಇ.ಡಿ, ಸಿಬಿಐ ವಿರುದ್ಧ ಸಿದ್ದರಾಮಯ್ಯ ವಿನಾ ಕಾರಣ ಅಪಪ್ರಚಾರ ಮಾಡುತ್ತಾರೆ. ನಮಗೆ ಲೋಕಾಯುಕ್ತ ಮೇಲೆ ನಂಬಿಕೆಯಿಲ್ಲ ಸಿಬಿಐ ತನಿಖೆ ನಡೆಸಲಿ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *