ಹಾವೇರಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ರೈತ ರುದ್ರಪ್ಪ ಅವರ ಹಾನಗಲ್ ತಾಲ್ಲೂಕಿನ ಹರನಗಿರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ ಎಂದರು.
ಬೆಂಗಳೂರಿನ ಮೆಜೆಸ್ಟಿಕ್, 175 ಎಕರೆ ಇದೆ ಇದು ಸಹ ವಕ್ಫ್ ಆಸ್ತಿಯೆಂದು ಹೇಳುತ್ತಿದ್ದಾರೆ. ನಾಳೆ ವಿಧಾನಸೌಧವೂ ವಕ್ಫ್ ಆಸ್ತಿಯಾದರೂ ಆಶ್ಚರ್ಯವಿಲ್ಲ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

