ಬೆಂಗಳೂರು : ವಕ್ಫ್ ಬೋರ್ಡ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರೈತರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ವತಿಯಿಂದ ಇಂದು ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಯಿತು.
ನಗರದ ಕಾಂಗ್ರೆಸ್ ಭವನದ ರೇಸ್ ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಕೈನಾಯಕರು ಕಿಡಿಕಾರಿದರು.
ವಕ್ಫ್ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿಸಿರುವ ತೇಜಸ್ವಿ ಸೂರ್ಯರನ್ನು ಕೂಡಲೇ ಬಂಧಿಸಿ ಎಂದು ಒತ್ತಾಯಿಸಿದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ವಕ್ಫ್ ಬೋರ್ಡ್ ನಿಂದ ಬಿಜೆಪಿ ಆಡಳಿತದಲ್ಲೂ ರೈತರಿಗೆ ನೋಟಿಸ್ ನೀಡಲಾಗಿತ್ತು. ಅದನ್ನು ಮರೆಮಾಚುತ್ತಿದ್ದಾರೆ ಎಂದು ಕೈ ಮುಖಂಡರು ವಾಗ್ದಾಳಿ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

