ಬೆಂಗಳೂರು: ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಮಂಜೂರು ಮಾಡಿದೆ. ಕಾರ್ಯಕ್ರಮ ಆಯೋಜಿಸಲು ಕೆಎಸ್‌ಎಂಸಿ ಎಂಡ್ ಎ ಸಂಸ್ಥೆಯ ಸೇವೆಯನ್ನು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿತಿ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ.
ಉತ್ತಮ ಗುಣಮಟ್ಟದ ಸರಕು, ಸೇವೆ ಸಮಂಜಸ ದರದಲ್ಲಿ ಪಡೆದುಕೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಂಡ್ಯದ ಜನ ಪ್ರತಿನಿಧಿಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಹೆಚ್ಚಿನ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಕೋರಿಕೆ ಸಲ್ಲಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

