Breaking News

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿಲೀನಕ್ಕೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನಕ್ಕೆ ಸಂಬಂಧಿಸಿದಂತೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.
ನಗರದಲ್ಲಿ ನಡೆದ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಒಂದು ರಾಜ್ಯ, ಒಂದು ಆರ್‌ಆರ್‌ಬಿ ಎಂಬುದು ಸರ್ಕಾರದ ತತ್ವವಾಗಿದೆ. ಹಾಗಾಗಿ, ವಿಲೀನ ಪ್ರಸ್ತಾವ ಕುರಿತು ಅಭಿಪ್ರಾಯ ಮಂಡಿಸಬೇಕಿದೆ ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಪಾತ್ರ ನಿರ್ಣಾಯಕವಾಗಿದೆ. ಸರ್ಕಾರದ ಮುದ್ರಾ, ಪಿ.ಎಂ-ವಿಶ್ವಕರ್ಮ ಸೇರಿ ಇತರೆ ಯೋಜನೆಯಡಿ ಅರ್ಹರಿಗೆ ಸೌಲಭ್ಯ ಒದಗಿಸಲು ಮುಂದಾಗಬೇಕಿದೆ ಎಂದು ಸೂಚಿಸಿದರು.
ಅಲ್ಲದೆ ಹೈನುಗಾರಿಕೆ, ಪಶುಪಾಲನೆ, ಮೀನುಗಾರಿಕೆಗೆ ಸಾಲ ಸೌಲಭ್ಯ ನೀಡಬೇಕು. ಪ್ರಾದೇಶಿಕ ವಿಭಾಗದ ವ್ಯಾಪ್ತಿಯಲ್ಲಿ ಕೃಷಿ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ನಿರ್ದೇಶನ ನೀಡಿದರು.
ಪ್ರಧಾನ ಮಂತ್ರಿ ಜನಧನ ಯೋಜನೆ, ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್‌ ಪಿಂಚಣಿ ಯೋಜನೆಯಡಿ ಇನ್ನೂ ಹೆಚ್ಚಿನ ಗುರಿ ಸಾಧನೆ ಮಾಡಬೇಕು ಎಂದು ಸೂಚಿಸಿದರು.
ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್‌ಎಂಇ) ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು. ಗ್ರಾಹಕರಿಗೆ ಡಿಜಿಟಲ್‌ ಸೇವೆ ಒದಗಿಸಬೇಕು ಎಂದು ಹೇಳಿದರು.
ಬ್ಯಾಂಕ್‌ಗಳ ಮೈಕ್ರೊ ಎಟಿಎಂ, ಕಾಲ್‌ ಸೆಂಟರ್‌, ನೆಟ್‌ ಬ್ಯಾಂಕಿಂಗ್‌, ವಿಡಿಯೊ ಕೆವೈಸಿ, ಆರ್‌ಟಿಜಿಎಸ್‌ ಸೇರಿ ಡಿಜಿಟಲ್‌ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿರುವ ಬಗ್ಗೆ ನಿರ್ಮಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ಇದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *