ಮಹಾರಾಷ್ಟ್ರ : ಕಾಂಗ್ರೆಸ್ ನ ಪ್ರಣಾಳಿಕೆಯಿಂದ ಮಹಾರಾಷ್ಟ್ರದ ಕಲ್ಯಾಣಕ್ಕೆ ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಈ ಬಗ್ಗೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ನಮ್ಮ 5 ಭರವಸೆಗಳು ಮಹಾರಾಷ್ಟ್ರದ ಎಲ್ಲರ ಕಲ್ಯಾಣಕ್ಕೆ ಸಹಕಾರಿಯಾಗುತ್ತವೆ. ಪ್ರತಿ ಕುಟುಂಬಕ್ಕೂ ವಾರ್ಷಿಕ ಸುಮಾರು ನೆರವು ಸಿಗುತ್ತದೆ ಎಂದು ಹೇಳಿದರು.
ನಮ್ಮ ಮಹಾಲಕ್ಷ್ಮಿ ಯೋಜನೆಯಲ್ಲಿ ಎಲ್ಲಾ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುವುದು, ಪ್ರತಿ ತಿಂಗಳು ತಲಾ 3000 ರೂ.ಗಳನ್ನು ನೀಡಲಾಗುವುದು ಈ ಮೂಲಕ ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಸಾಗಿಸಬಹುದು ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
ಕರ್ನಾಟಕದಂತೆ ಇಲ್ಲಿ ಕೂಡ ಮಹಿಳೆಯರಿಗೆ ಉಚಿತ ಬಸ್ ಸೇವೆಯನ್ನು ಆರಂಭಿಸಲಿದ್ದು, ಈ ಮೂಲಕ ಮಹಿಳೆಯರು ಪುಣ್ಯ ಕ್ಷೇತ್ರ ಸೇರಿದಂತೆ ಎಲ್ಲಾದರೂ ಉಚಿತವಾಗಿ ಹೋಗಿ ಬರಬಹುದು. ಜೊತೆಗೆ ರೈತರಿಗೆ ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರಿಗೆ ತಲಾ 50000 ರೂ. ನೀಡಲು ಯೋಜನೆ ಅನುಷ್ಟಾನಕ್ಕೆ ತರಲು ಮುಂದಾಗಿದ್ದೇವೆ ಎಂದು ಖರ್ಗೆ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

