Breaking News

ನ.14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ, 14.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.
ವಿ‍ಧಾನಸಭೆ ಉಪ ಚುನಾವಣೆ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವು ಯೋಜನೆಗಳಿಗೆ ಹಣ ಬಿಡುಗಡೆ ಆಗುವ ಸಾಧ್ಯತೆಯಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *