Breaking News

ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ

ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಹುಬ್ಬಳ್ಳಿ ಮೂರುಸಾವಿರ ಮಠದ ಮೈದಾನದಲ್ಲಿ ನಿನ್ನೆ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ, ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು.
ಇದೇ ವೇಳೆ ಜನ ಸಾಮಾನ್ಯರಿಗೆ ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಯಾವತ್ತೂ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂಥ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ಪ್ರತಿಪಾದಿಸಿದರು.
ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣುಗುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ದೇಶಾದ್ಯಂತ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಮುಂದಾಗಿದೆ. ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಭಾರತ್ ಬ್ರ್ಯಾಂಡ್ ಅಡಿ ಆಹಾರ ಧಾನ್ಯ ವಿತರಣೆ ಕೈಗೊಂಡಿದ್ದು, ಈಗ ವಾಣಿಜ್ಯ ನಗರಿ ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಲ್ಲಿ ವಿತರಣೆ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *