ನವಲಗುಂದ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕುರಿತು ತಹಶೀಲ್ದಾರ ಸುಧೀರ ಸಾಹುಕಾರ ಅಧ್ಯಕ್ಷತೆಯಲ್ಲಿ ರೈತರೊಂದಿಗೆ ಸಭೆ ನಡೆಯಿತು.
ತಹಶೀಲ್ದಾರ ಸುಧೀರ ಸಾಹುಕಾರ ಮಾತನಾಡಿ, ಈಗಾಗಲೇ ಜಂಟಿ ಸಮೀಕ್ಷೆ ಮಾಡಿ ವರದಿ ಸಿದ್ಧಪಡಿಸಿದ್ದು, ಕೃಷಿ, ತೊಟಗಾರಿಕೆ, ಕಂದಾಯ ಇಲಾಖೆ ಸೇರಿದಂತೆ ಎಲ್ಲ ಗ್ರಾಮ ಪಂಚಾಯಿತಿಗಳ ಫಲಕದಲ್ಲಿ ಪ್ರಕಟಿಸಲಾಗಿದೆ. ರೈತರು ತಮ್ಮ ಹೆಸರು ಪರಿಶೀಲಿಸಿ ಕೊಂಡು ಅಕ್ಷೇಪಣೆಗಳಿದ್ದರೆ ಏಳು ದಿನಗಳ ಒಳಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಸಮೀಕ್ಷೆ ಸರಿಯಾಗಿ ಆಗಿಲ್ಲ ಎಂದು ರೈತ ಮುಖಂಡರು ಕೃಷಿ ಇಲಾಖೆ ಅಧಿಕಾರಿ ಹಾಗೂ ತೊಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ವಾಗ್ವಾದ ನಡೆಸಿದರು.
ತಹಶೀಲ್ದಾರ ಮಧ್ಯ ಪ್ರವೇಶಿಸಿ, ಕೃಷಿ ಬೆಳೆಗಳಾದ ಮೆಕ್ಕೆಜೋಳ, ಹತ್ತಿ, ಶೇಂಗಾ ಸೇರಿ 10,838 ಹೆಕ್ಟೇರ್ ಹಾಗೂ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ 2,487 ಹೆಕ್ಟೇರ್ ಹಾನಿ ಯಾದ ಬಗ್ಗೆ ವರದಿ ಸಿದ್ದವಾಗಿದ್ದು, ಆಕ್ಷೇಪಣೆ ಸಲ್ಲಿಸಿದರೆ ಮರು ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು. ಬೆಳೆ ಹಾನಿಯಾದ ಎಲ್ಲ ರೈತರಿಗೂ ನ್ಯಾಯಯುತವಾಗಿ ಪರಿಹಾರ ದೊರಕಬೇಕು ಎಂದು ರೈತ ಮುಖಂಡ ಲೋಕನಾಥ ಹೆಬಸೂರ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

