ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ರೈತರು ಹಾಗೂ ಕೊನೆಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈಗ ಆಹಾರ ಧಾನ್ಯಗಳನ್ನು ಬಫರ್ ಸ್ಟಾಕ್ ನಲ್ಲಿರುವುದನ್ನು ಜನರಿಗೆ ಪೂರೈಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಸಮಸ್ಯೆಯಿಂದ ಜನರು ಹೈರಾಣಾಗಿಸಿದೆ. ಈ ನಿಟ್ಟಿನಲ್ಲಿ ಜನರಿಗೆ ಅಗತ್ಯತೆಗೆ ಅನುಗುಣವಾಗಿ ನಮ್ಮಲ್ಲಿರುವ ಬಫರ್ ಸ್ಟಾಕ್ (ದಾಸ್ತಾನಿನ)ನಲ್ಲಿರುವ ಆಹಾರವನ್ನು ಕೈಗೆಟುಕುವ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ ಎಂದರು.
ಪ್ರತಿ ವರ್ಷ 10 ಸಾವಿರ ಕೋಟಿ ಹಣವನ್ನು ವ್ಯಯಿಸುವ ಮೂಲಕ ಅಕ್ಕಿಯನ್ನು 34 ರೂ.ಕೆ.ಜಿ, ಕಡಲೇ ಬೆಳೆಯನ್ನು 70ರೂ, ತೊಗರಿಬೆಳೆಯನ್ನು 107 ರೂ. ಹಾಗೂ ಗೋಧಿ ಹಿಟ್ಟನ್ನು 30 ರೂ. ಕೆಜಿಗೆ ವಿತರಣೆ ಮಾಡುವ ಮೂಲಕ ಜನರಿಗೆ ಗುಣಮಟ್ಟದ ಆಹಾರವನ್ನು ಒದಗಿಸಲಾಗುತ್ತದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

