Breaking News

ನ. 18 ರಂದು ಶ್ರೀ ಕನಕದಾಸ ಜಯಂತಿ

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನವೆಂಬರ 18 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾಜದ ಮುಖಂಡರಾದ ಬಸಪ್ಪ ಗುಡೆಣ್ಣವರ, ದೇವರಾಜ ಕಂಬಳಿ, ಎನ್.ಎನ್.ಸವಣೂರ, ವಸಂತ ಬಿಳೆಲಿ ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

**

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *