Breaking News

ರಾಜಕೀಯದಲ್ಲಿ ನನಗೆ ಹೆಸರು ಬರಲು ಬಿ.ಎಸ್.ಯಡಿಯೂರಪ್ಪನವರ ಪಾತ್ರವೂ ಇದೆ: ಕೇಂದ್ರ ಸಚಿವ ಎಚ್ಡಿಕೆ

ಚನ್ನಪಟ್ಟಣ: ರಾಜಕೀಯದಲ್ಲಿ ನನಗೆ ಹೆಸರು ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರವೂ ಇದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರದ ವೇಳೆ ಮಾತನಾಡಿದ ಅವರು (2005-06) ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕವಾಗಿ ತೀರ್ಮಾನ ಮಾಡಿದ್ದೆ.
ಅಧಿಕಾರ ನೀಡಿದ್ದರೆ ಅಂದೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ವನಾಶ ಆಗುತ್ತಿತು. ಆದರೆ, ವಿಧಿ ಆಟದ ಮುಂದೆ ನಮ್ಮದೇನು ನಡೆಯಲಿಲ್ಲ. ಆದರೆ, ಕೆಲವರು ಮಾಡಿದ ಕೃತ್ಯದಿಂದ ನಾನು 14 ವರ್ಷಗಳ ಕಾಲ ವನವಾಸ ಅನುಭವಿಸಿದೆ ಎಂದು ಭಾವುಕರಾದರು.
ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಮೈತ್ರಿ ಹಾಲು ಜೇನಿನಂತೆ ಬೆರೆತು ಹೋಗಿದ್ದು, ಅದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *