Breaking News

ಪಿಎಂ ಆವಾಸ್ ಯೋಜನೆಯಡಿ ಅನುದಾನ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಅಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ ಅನುದಾನವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆಯಲು ಗುರುವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ.
ಸಭೆಯ ಬಳಿಕ ವಿವರ ನೀಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, ಪಿ.ಎಂ. ಆವಾಸ್‌ ಯೋಜನೆಯ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರವು ₹ 1.5 ಲಕ್ಷ ಅನುದಾನವನ್ನು ಮಾತ್ರ ಒದಗಿಸುತ್ತಿದೆ.
ಇದರಿಂದ ಯೋಜನೆ ಅನುಷ್ಠಾನ ಕಷ್ಟವಾಗುತ್ತಿದೆ. ಕೇಂದ್ರದ ಪಾಲಿನ ಅನುದಾನ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಿದ್ದಾರೆ ಎಂದರು.
ಪಿ.ಎಂ. ಆವಾಸ್‌ 2.0 ಯೋಜನೆ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಮಂಜೂರಾತಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ, ವಿವಿಧ ಹಂತಗಳಲ್ಲಿ ಸಮಿತಿಗಳ ರಚನೆ, ಶೇಕಡ 60:40ರ ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯಗಳು ಅನುದಾನ ಭರಿಸುವುದು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಎಲ್ಲ ಸುಧಾರಣಾ ಕ್ರಮಗಳನ್ನು ಅನುಷ್ಠಾನಗೊಳಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *