ಬೆಂಗಳೂರು : ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್ ಅನ್ನು 20 ಕೋಟಿ ರೂ.ಅನುದಾನದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಬ್ಬಾಳದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒದಗಿಸಿರುವ ಈ 20 ಕೋಟಿ ರೂ. ಅನುದಾನ ಬಳಸಿಕೊಂಡು ಬೆಂಗಳೂರಿನ ಹೆಬ್ಬಾಳದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಸ್ಥಾಪನೆ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

