Breaking News

ಮೈಸೂರಿನಲ್ಲಿ ಡಿ.23 ರಂದು ರಾಷ್ಟ್ರೀಯ ರೈತ ಸಮಾವೇಶ ಆಯೋಜನೆ: ಕುರುಬೂರು ಶಾಂತಕುಮಾರ್

ಮೈಸೂರು: ವಿಶ್ವ ರೈತ ದಿನದ ಅಂಗವಾಗಿ ಡಿ.23ರಂದು ಮೈಸೂರಿನಲ್ಲಿ ರಾಷ್ಟ್ರೀಯ ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳ ನೂರಾರು ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಎಲ್ಲ ಸರ್ಕಾರಗಳೂ ರೈತರಿಗೆ ಮೋಸ ಮಾಡಿವೆ, ಮಾಡುತ್ತಿವೆ. ಇದರಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳು ಕೃಷಿ ವಲಯವನ್ನು ವಶಪಡಿಸಿಕೊಳ್ಳಲು ವಾಮಮಾರ್ಗಗಳನ್ನು ಬಳಸುತ್ತಿವೆ. ಮುಂದಿನ ದಿನಗಳಲ್ಲಿ ರೈತ ಕುಲವನ್ನು ಅಪಾಯದಿಂದ ಪಾರು ಮಾಡಲು ಚಿಂತಿಸಬೇಕಾಗಿದೆ ಅದಕ್ಕಾಗಿ ರೈತ ಸಮಾವೇಶ ಆಯೋಜಿಸಲಾಗಿದೆ ಎಂದರು.
ಶುಂಠಿ ಬೆಳೆದ ರೈತರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ ಕಳೆದ ವರ್ಷ ಚೀಲಕ್ಕೆ ₹5 ಸಾವಿರ ದರ ಇತ್ತು ಪ್ರಸಕ್ತ ಸಾಲಿನಲ್ಲಿ ₹1,600ಕ್ಕೆ ಇಳಿಕೆಯಾಗಿದೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲೆಂದು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ ಕಾನೂನು ಜಾರಿಗೆ ತರಬೇಕೆಂದು ದೆಹಲಿಯಲ್ಲಿ ರೈತ ಹೋರಾಟ ನಡೆಸಲಾಗುತ್ತಿದೆ. ಇದೇ ತಿಂಗಳು 25ರಿಂದ ನಡೆಯಲಿರುವ ಸಂಸತ್‌ ಅಧಿವೇಶನದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯು ದೇಶದಾದ್ಯಂತ ರೈತ ಚಳವಳಿಯನ್ನು ತೀವ್ರಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ 8 ತಿಂಗಳಿಂದ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸಿದೆ ಆದರೆ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಜೊತೆಗೆ ಪ್ರೋತ್ಸಾಹಧನವಾಗಿ ₹500 ಹೆಚ್ಚುವರಿಯಾಗಿ ನೀಡಲು ಮುಖ್ಯಮಂತ್ರಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್‌, ಕಿರಗಸೂರು ಶಂಕರ್, ನೀಲಕಂಠಪ್ಪ, ಪೈಲ್ವಾನ್ ವೆಂಕಟೇಶ್ ಹಾಗೂ ಸೂರಿ ಉಮೇಶ್ ಪಾಲ್ಗೊಂಡಿದ್ದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *