ಅಣ್ಣಿಗೇರಿ: ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಯಾದ ಬೆಳೆ ವೀಕ್ಷಣೆಗಾಗಿ ರಾಜ್ಯ ಸರ್ಕಾರ ನೇಮಿಸಿದ ಅಧಿಕಾರಿಗಳ ತಾಲೂಕಿನ ವಿವಿಧೆಡೆ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಈ ವೇಳೆ ರೈತರಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಶಾಸಕ ಎನ್.ಎಚ್.ಕೋನರಡ್ಡಿ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ತಂಡದ ಮುಖ್ಯಸ್ಥೆ, ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ಗೌಡರ, ನಿರಂತರವಾಗಿ ಸುರಿದ ಮಳೆಯಿಂದ ಗೋವಿನಜೋಳ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಶೇಂಗಾ ಸೇರಿದಂತೆ ತಾಲೂಕಿನಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಸೇರಿ 13,326 ಹೆಕ್ಟೇರ್ ಪ್ರದೇಶದ ಬೆಳೆ ಹಾಳಾಗಿದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಅದರ ಪ್ರಕಾರ ಹಾನಿ ವೀಕ್ಷಣೆಗೆ ಆಗಮಿಸಿರುವುದಾಗಿ ತಿಳಿಸಿದರು.
ಅಧ್ಯಯನ ತಂಡದ ಸದಸ್ಯೆ, ತೋಟಗಾರಿಕೆ ಉಪನಿರ್ದೇಶಕಿ ಭುವನೇಶ್ವರಿ ಮಾತನಾಡಿ ನಲವಡಿ ಭದ್ರಾಪುರ ಹಾಗೂ ಇನ್ನೂ ಕೆಲವು ಗ್ರಾಮಗಳಲ್ಲಿ ಬೆಳೆ ವೀಕ್ಷಣೆ ಮಾಡಲಾಯಿತು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಅಧಿಕಾರಿಗಳ ತಂಡ ರಾಜ್ಯ ಸರ್ಕಾರಕ್ಕೆ ವರದಿ ನೀಡಿ ರೈತರಿಗೆ ಪರಿಹಾರ ಸಿಗುವಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

