ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು.
ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ, ಎಲ್ಲಾ ಶಿಕ್ಷಕರು ಮೆರಿಟ್ ಮೇಲೆ ಬಂದಿರುತ್ತಾರೆ. ಸಾಧನೆ ಮಾಡುವವರೆಲ್ಲಾ ಸರ್ಕಾರಿ ಶಾಲೆಯ ಮಕ್ಕಳೇ ಆಗಿದ್ದಾರೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿರ್ಭಿತಾ, ಖಾಸಗಿ ಶಾಲೆಗಳಲ್ಲಿ ವ್ಯಾನ್, ಬಸ್ ವ್ಯವಸ್ಥೆ ಇರುತ್ತದೆ, ಪಾಲಿಕೆ ಶಾಲೆಗಳಿಗೆ ವ್ಯಸಸ್ಥೆ ಕಲ್ಪಿಸಬಹುದೇ ಎಂದು ಕೇಳಿದಾಗ, ಶಾಲೆಗಳಿಗೆ ಹತ್ತಿರವಿರುವ ಮಕ್ಕಳೇ ಬರುವುದರಿಂದ ವಾಹನಗಳ ವ್ಯವಸ್ಥೆ ಮಾಡಿರುವುದಿಲ್ಲ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

