ಬೆಂಗಳೂರು: ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜನವರಿ 01- 2025 ರಂದು ಕರ್ನಾಟಕದಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರಾಯಚೂರು, ಕೊಪ್ಪಳ, ಬಳ್ಳಾರಿ ಪ್ರದೇಶದಲ್ಲಿ ಈಗಾಗಲೇ ಭತ್ತ ಕಟಾವು ಹಂತದಲ್ಲಿದ್ದರಿಂದ ಭತ್ತ ಮಾರಾಟಕ್ಕೆ ರೈತರು ಮಾರುಕಟ್ಟೆಗೆ ಬರುತ್ತಿದ್ದಾರೆ.
ಕಾರಣ ಸಚಿವ ಎನ್‌ಎಸ್ ಬೋಸರಾಜು ಅವರು ಸಂಪುಟ ಸಚಿವರಾದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕೆಎಚ್ ಮುನಿಯಪ್ಪ, ಕೃಷಿ ಸಚಿವರಾದ ಚೆಲುವನಾರಾಯಣ ಸ್ವಾಮಿ ಹಾಗೂ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡ ಅವರೊಂದಿಗೆ ಸಚಿವ ಸಂಪುಟ ಸಬ್ ಕಮಿಟಿ ಸಭೆ ಮಾಡಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸುವ ಕುರಿತು ಚರ್ಚಿಸಿದರು.
ಸಂಪುಟ ಸಬ್ ಕಮೀಟಿ ಸಭೆಯಲ್ಲಿ ಶೀಘ್ರ ರೈತರಿಗೆ ತೊಂದರೆಯಾಗದಂತೆ ಶೀಘ್ರ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ರೈತರು ಭತ್ತ ಮಾರಾಟಕ್ಕೆ ಆತಂಕ ಪಡಬೇಕಾಗಿಲ್ಲ ಬೆಂಬಲ ಬೆಲೆಯೊಂದಿಗೆ ರಾಯಚೂರು ಜಿಲ್ಲೆಯಲ್ಲಿ ಶೀಘ್ರ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದೆಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

