ಧಾರವಾಡ: ಭಾರತ ಸರ್ಕಾರದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮವನ್ನು ಸೆ. 24, 2024 ರಿಂದ ಹಮ್ಮಿಕೊಳ್ಳಲಾಗಿತ್ತು. ಸುಮಾರು 63 ಹೆಚ್ಚು ಜನ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಸಂಘಟಿಸಲಾಗಿತ್ತು.
ಧಾರವಾಡ ಜಿಲ್ಲೆಯಲ್ಲಿ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನದಲ್ಲಿ ಧಾರವಾಡ ಜಿಲ್ಲೆಯಲ್ಲಿನ 187 ಶಾಲೆಗಳನ್ನು ಮತ್ತು 4 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ.
ಧಾರವಾಡ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಅಗಸನಹಳ್ಳಿ ಮತ್ತು ಶೇಡಬಾಳ, ಉಪ್ಪಿನ ಬೆಟಗೇರಿಯ ಜೀರಿಗಿವಾಡ ಮತ್ತು ದಾಸನಕೊಪ್ಪ ಗ್ರಾಮಗಳನ್ನು ಸಂಪೂರ್ಣವಾಗಿ ತಂಬಾಕು ಮುಕ್ತವೆಂದು ಘೋಷಿಸಿಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಸರ್ಕಾರೇತರ ಸಂಸ್ಥೆಗಳು (ಎನ್‍ಜಿಓ), ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

