ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು.
ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

