Breaking News

ಮಹಾರಾಷ್ಟ್ರ ಚುನಾವಣೆ: ರೈತರ ಸಮಸ್ಯೆ ಬಗೆಹರಿಸಲು ರಾಹುಲ್ ಗಾಂಧಿ ಭರವಸೆ

ಮುಂಬೈ: ಸೋಯಾಬೀನ್, ಹತ್ತಿ ಮತ್ತು ಈರುಳ್ಳಿ ಬೆಳೆಯುವ ರೈತರ ಸಮಸ್ಯೆಗಳನ್ನು ಮಹಾ ವಿಕಾಸ್ ಆಘಾಡಿ (ಎಂವಿಎ) ಮೈತ್ರಿಕೂಟವು ಬಗೆಹರಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಎಂವಿಎಯು ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.
ಸೋಯಾಬೀನ್‌ಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಬೋನಸ್‌ ಸೇರಿದಂತೆ ಪ್ರತಿ ಕ್ವಿಂಟಲ್‌ಗೆ ₹7,000 ನೀಡಲಿದೆ. ಈರುಳ್ಳಿಗೆ ನ್ಯಾಯಯುತ ಬೆಲೆ ನಿಗದಿಗೆ ಸಮಿತಿ ರಚಿಸಲಿದೆ ಮತ್ತು ಹತ್ತಿಗೂ ಸೂಕ್ತ ಎಂಎಸ್‌ಪಿ ನಿಗದಿಮಾಡಲಿದೆ ಎಂದು ಎಕ್ಸ್‌ ನಲ್ಲಿ ತಿಳಿಸಿದ್ದಾರೆ.
ಪ್ರತಿ ಕ್ವಿಂಟಲ್‌ ಸೋಯಾಬೀನ್‌ಗೆ ₹ 6,000 ಎಂಎಸ್‌ಪಿ ನಿಗದಿ ಮಾಡುವ ಭರವಸೆಯನ್ನು ಬಿಜೆಪಿಯು ಕಳೆದ ಮೂರು ಚುನಾವಣೆಗಳಿಂದ ನೀಡುತ್ತಾ ಬಂದಿದೆ. ಆದರೆ ರೈತರು ಕಷ್ಟಪಟ್ಟು ಬೆಳೆದ ಸೋಯಾಬೀನ್‌ಅನ್ನು ಕ್ವಿಂಟಲ್‌ಗೆ ₹3,000- ₹ 4,000ಕ್ಕೆ ಮಾರಾಟ ಮಾಡುವ ಅನಿವಾರ್ಯಕ್ಕೆ ಸಿಲುಕಿದ್ದಾರೆ ಎಂದಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *