Breaking News

ಗ್ರಾಮಗಳಿಗೆ ಸರಿಯಾಗಿ ಬಸ್ ಬಿಡದೆ ಹೋದರೆ ಬಸ್ ಡಿಪೋ ಮುಚ್ಚಿ: ಅಧಿಕಾರಿಗಳಿಗೆ ಸಂತೋಷ್ ಲಾಡ್ ತರಾಟೆ

ಧಾರವಾಡ: ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸರಿಯಾಗಿ ಬಸ್ ಗಳನ್ನು ಬಿಡದೆ ಹೋದರೆ ಬಸ್ ಡಿಪೋ ಮುಚ್ಚಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿ ಧಾರವಾಡ ಡಿಪೋ ಮ್ಯಾನೇಜರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಲಘಟಗಿಯಲ್ಲಿ ಬಸ್ ಡಿಪೋ ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ. ವಿವಿಧ ಗ್ರಾಮಗಳಿಂದ ದೂರು ಕೇಳಿ ಬರುತ್ತಿವೆ ಡಿಪೋ ಕತ್ತೆ ಕಾಯಲು ಇಟ್ಟುಕೊಂಡಿದ್ದೇವಾ ಎಂದು ಅಧಿಕಾರಿಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.
ಇದಕ್ಕೆ 55 ಸಿಬ್ಬಂದಿ ಗೈರು ಹಾಜರಾಗಿದ್ದಾರೆ ಇದರಿಂದ ಸಮಸ್ಯೆಯಾಗುತ್ತಿದೆ ಅಧಿಕಾರಿಗಳು ಉತ್ತರಿಸಿದರು. ಹುಬ್ಬಳ್ಳಿಯಿಂದ ಸಾಯಂಕಾಲ 7 ಗಂಟೆಯಿಂದ ಕಲಘಟಗಿಗೆ ಯಾವುದೇ ಬಸ್ ಸೌಕರ್ಯವಿಲ್ಲ ಎಂದು ದೂರ ಕೇಳಿ ಬಂದವು. ತಾಲೂಕಿಗೆ ಈಗ ಹತ್ತು ಹೊಸ ಬಸ್ ಬಂದಿವೆ ಎಂದು ಅಧಿಕಾರಿಗಳು ಹೇಳಿದರು.
ತ್ರೈಮಾಸಿಕ ಕೆಡಿಪಿ ಪ್ರಗತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಉಪವಿಭಾಗಾಧಿಕಾರಿ ಶಾಲಂ ಹುಸೇನ, ಜಿಲ್ಲಾ ಸಮಾಜ ಕಲ್ಯಾಣ ಜಂಟಿ ನಿರ್ದೇಶಕಿ ಶುಭಂ ಎಸ್ ಆರ್ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಶುಭಾ ಪಿ, ಮಂಜುನಾಥಗೌಡ ಮುರಳ್ಳಿ, ಶಿವಲಿಂಗಪ್ಪ ಯಲಿವಾಳ, ಇಓ ಪರಶುರಾಮ ಸಾವಂತ, ವಿರೇಶ ಮುಳಗುಂದಮಠ, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *