Breaking News

ಫೈಓವ‌ರ್ ಕಾಮಗಾರಿ ಪುನಃ ಪ್ರಾರಂಭವಾಗಿದೆ: ಲಾಡ್

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಡುವೆ ಬಿಆರ್‌ಟಿಎಸ್‌ (ಬಸ್‌ ಕ್ಯಾಪಿಡ್ ಟ್ರಾನ್ಸಿಸ್ಟ್ ಸಿಸ್ಟಂ) ಬದಲು ಎಲ್‌ಆರ್‌ಟಿ (ಲೈಟ್ ರೈಲ್ ಟ್ರಾನ್ಸಿಟ್) ತರುವ ಕುರಿತು ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಇಂದು ಸರ್ಕ್ಯೂಟ್ ಹೌಸ್‌ನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್‌ಆರ್‌ಟಿ (ಲೈಟ್ ರೈಲ್ ಟ್ರಾನ್ಸಿಟ್) ಬಗ್ಗೆ ಯೋಜನೆ ರೂಪಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸ್ಪಷ್ಟತೆ ದೊರೆಯಲಿದೆ. ಹುಬ್ಬಳ್ಳಿ- ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಗುಣಮಟ್ಟ ಹಾಗೂ ಹಸ್ತಾಂತರದ ಬಗ್ಗೆ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಹ ಮತ್ತೊಮ್ಮೆ ಸಭೆ ನಡೆಸಲಾಗುವುದು. ಫೈಓವ‌ರ್ ಕಾಮಗಾರಿ ಪುನಃ ಪ್ರಾರಂಭವಾಗಿದೆ. ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 127 ಹೊಸ ಬಸ್‌ಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಇಎಸ್‌ಐ ಆಸ್ಪತ್ರೆಗಳಿಗೆ ಜನರು ಬರುವಂತೆ ಮಾಡಬೇಕಿದೆ. ಬೇರೆ ಆಸ್ಪತ್ರೆಗಳಿಗೆ ಫಲಾನುಭವಿಗಳು ತೆರಳದಂತೆ ಉತ್ತಮ ಚಿಕಿತ್ಸೆ ನೀಡಬೇಕಾಗಿದೆ. ಸುಮಾರು 40 ಲಕ್ಷ ಫಲಾನುಭವಿಗಳು ಇದ್ದಾರೆ. ಅತ್ಯಾಧುನಿಕ ಸಲಕರಣೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಜನರಿಗೆ ನೀಡಬೇಕು ಎಂದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *