Breaking News

ಕೋ-ಆಪರೇಟಿವ್‌ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಪರಿಶೀಲಿಸಿ ಕ್ರಮ: ಸಿಎಂ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಮಾತನಾಡಿದರು.
ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದರು.
ರಾಜ್ಯದಲ್ಲಿ ಸಹಕಾರಿ ಚಳವಳಿ 1904 ರಲ್ಲೇ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು. 1905 ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯಾ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪ್ರೋತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ಸಹಕಾರಿಯಾಯ್ತು ಎಂದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಕರೆ ನೀಡಿದರು.
ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ. ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹ ದನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.
ಪಂಚಾಯ್ತಿ, ಸೊಸೈಟಿ, ಶಾಲೆ ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು‌ ಎಂದು ಹೇಳಿದರು.
ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದ್ದನ್ನು ಈ ಸಂದರ್ಭದಲ್ಲಿ ಸಿಎಂ ಸ್ಮರಿಸಿದರು.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *