Breaking News

ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ: ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ ಎಂ ಕೃಷ್ಣಾ ನಗರದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಸಾಜಿಯಾ ನಾಲಬಂದ್‌ ಅತ್ತಾ ಎಂದು ತಿಳಿದುಬಂದಿದ್ದು ಇಂದು ರಾತ್ರಿ 9.30ರ ಸುಮಾರಿಗೆ ಮನೆಯಲ್ಲಿ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಸಾಜಿಯಾಳ ಮೈದುನ ನಾಶೀರ್ ಎಂಬಾತ ಚಾಕು ತೆಗೆದುಕೊಂಡು ಅತ್ತಿಗೆಯ ಕುತ್ತಿಗೆಗೆ ಇರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಕೂಡಲೇ ಗಾಯಗೊಂಡ ಸಾಜಿಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಅಪರಾಧ ವಿಭಾಗದ ಡಿಸಿಪಿ ನಂದಗಾವಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *