ಬೆಂಗಳೂರು : ಸಂತಶ್ರೇಷ್ಠ ಕನಕದಾಸರ 537 ನೇ ಜಯಂತಿ ಮಹೋತ್ಸವವನ್ನ ಸರ್ಕಾರದ ವತಿಯಿಂದ ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ ಶುಭಾಶಯಗಳನ್ನು ಕೋರಿದರು.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಶಾಸಕರು ಮತ್ತು ಮುಖಂಡರು ಉಪಸ್ಥಿತರಿದ್ದರು.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಕ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಾಗೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

