ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು.
ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕಾ ಅಧ್ಯಕ್ಷ ಯೋಗಪ್ಪ ಗೊಲನಾಯ್ಕರ, ಪ್ರೇಮಾ ಹತ್ತಿಕಟಗಿ ಕನಕದಾಸರ ಕುರಿತು ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

