Breaking News

ಜಿ20 ಶೃಂಗಸಭೆ: ಪ್ರಧಾನಿ ಮೋದಿ, ಬೈಡನ್ ಚರ್ಚೆ

ರಿಯೋ ಡಿ ಜನೈರೋ: ತ್ರಿರಾಷ್ಟ್ರ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬ್ರೆಜಿಲ್‌ನ ರಿಯೋ ಡಿ ಜನೈರೋ ತಲುಪಿದ್ದಾರೆ. ಇಲ್ಲಿ ಜಿ20 ಶೃಂಗಸಭೆ ಆರಂಭವಾಗಿದ್ದು, ಸಭೆಯಲ್ಲಿ ಮೋದಿ ಭಾಗಿಯಾಗಿದ್ದಾರೆ.
ಬ್ರೆಜಿಲ್‌ಗೆ ತಲುಪಿದ ಮೋದಿ ಅವರನ್ನು ಅಧ್ಯಕ್ಷ ಲುಲಾ ಡ ಸಿಲ್ವಾ ಅವರು ಸ್ವಾಗತಿಸಿದರು.
ಈ ವೇಳೆ ಜೈ ಶ್ರೀ ಕೃಷ್ಣಾ, ವಂದೇ ಮಾತರಂ ಘೋಷಣೆಗಳು ಮೊಳಗಿದವು. ಬಳಿಕ ಜಿ20 ಶೃಂಗಸಭೆಯಲ್ಲಿ ಮೋದಿ ಭಾಗಿಯಾದರು. ಈ ವೇಳೆ ಅವರು ಅಮೆರಿಕ ಅಧ್ಯಕ್ಷ ಬೈಡೆನ್‌ ಪಕ್ಕದಲ್ಲಿ ಕುಳಿತು ಕೆಲಕಾಲ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಚೀನ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಹಲವು ಪ್ರಮುಖ ನಾಯಕರು ಜಿ20 ಸಭೆಯಲ್ಲಿ ಭಾಗಿಯಾಗಿದ್ದು, ಇಂದು ಇವರೊಂದಿಗೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ನೈಜೀರಿಯಾ ಪ್ರವಾ ಸದ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ, ಅಲ್ಲಿನ ಅಧ್ಯಕ್ಷ ಬೋಲಾ ಅಹ್ಮದ್‌ ತಿನುಬು ಅವರಿಗೆ ಸಿಲೋಫ‌ರ್‌ ಪಂಚಾಮೃತ ಕಳಶವನ್ನು ಉಡುಗೊರೆಯಾಗಿ ನೀಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *